ಟಿ. ಜಿ. ಶ್ರೀನಿಧಿ ಪೆನ್ಡ್ರೈವ್, ಮೆಮೊರಿ ಕಾರ್ಡ್ ಇತ್ಯಾದಿಗಳನ್ನೆಲ್ಲ ಮತ್ತೆ ಮತ್ತೆ ಬಳಸುತ್ತಿರುವುದು ಸುಲಭ, ನಿಜ. ಆದರೆ ಮಾಹಿತಿ ತುಂಬುವ - ಅಳಿಸುವ - ಮತ್ತೆ ತುಂಬುವ ಈ ಪ್ರಕ್ರಿಯೆ ಒಂದಷ್ಟು ಸಾರಿ ಪುನರಾವರ್ತನೆ ಆಗುತ್ತಿದ್ದಂತೆ ಆ ಸಾಧನದ ವಿಶ್ವಾಸಾರ್ಹತೆ ಕಡಿಮೆಯಾಗುತ್ತ ಬರುತ್ತದೆ. ಇದ್ದಕ್ಕಿದ್ದಂತೆ ಒಂದು ದಿನ ಅದರಲ್ಲಿರುವ ಮಾಹಿತಿಯನ್ನು ಓದುವುದೇ ಸಾಧ್ಯವಾಗುವುದಿಲ್ಲ! ಹೀಗಾಗಲು ಹಲವು ಕಾರಣಗಳಿರಬಹುದು. ಬಹಳಷ್ಟು ಸಾರಿ ಬಳಸಿ ಹಳೆಯದಾಗಿರುವುದರಿಂದ ಅದು ಹಾಳಾಗಿರಬಹುದು, ಅಥವಾ ಬ್ಯಾಡ್ ಸೆಕ್ಟರ್ ಸಮಸ್ಯೆ ಸೃಷ್ಟಿಯಾಗಿರಬಹುದು. ಅಷ್ಟೇ ಏಕೆ, ವೈರಸ್ ಬಂದಿರುವ ಅಥವಾ ಕಂಪ್ಯೂಟರಿನಲ್ಲೇ ಸಮಸ್ಯೆಯಿರುವ ಸಾಧ್ಯತೆಯೂ ಇರುತ್ತದೆ. ಇಂತಹ ಸನ್ನಿವೇಶದಲ್ಲಿ ಮೊದಲು ಅದನ್ನು ಬೇರೊಂದು ಕಂಪ್ಯೂಟರಿನಲ್ಲೋ ಮೊಬೈಲಿನಲ್ಲೋ ಬಳಸಲು ಪ್ರಯತ್ನಿಸಬಹುದು. ಆಂಟಿವೈರಸ್ ತಂತ್ರಾಂಶ ಬಳಸಿ ವೈರಸ್ ಕಾಟವೇನಾದರೂ ಇದೆಯೇ ಎಂದೂ ಪರೀಕ್ಷಿಸಬಹುದು. ಇಷ್ಟಾದರೂ ಸಮಸ್ಯಾತ್ಮಕ ಮೆಮೊರಿ ಕಾರ್ಡ್ ಅಥವಾ ಪೆನ್ಡ್ರೈವನ್ನು ತೆರೆಯುವುದು ಸಾಧ್ಯವಾಗುತ್ತಿಲ್ಲ ಎಂದರೆ ಫೈಲ್ ರಿಕವರಿ ತಂತ್ರಾಂಶಗಳ ಮೊರೆಹೋಗಬೇಕಾದ್ದು ಅನಿವಾರ್ಯವಾಗುತ್ತದೆ. ಸಾಮಾನ್ಯ ಮಾರ್ಗದಲ್ಲಿ ಓದಲು ಸಾಧ್ಯವಾಗದ ಮಾಹಿತಿಯನ್ನು ಹಲವು ಬಗೆಯ ಶೇಖರಣಾ ಮಾಧ್ಯಮಗಳಿಂದ ಮರಳಿ ಪಡೆಯಲು ನೆರವಾಗುವುದು ಈ ತಂತ್ರಾಂಶಗಳ ವೈಶಿಷ್ಟ್ಯ. ಅಳಿಸಿಹೋದ ಮಾಹಿತಿಯನ್ನು ಮರಳಿ ಪಡೆಯುವಲ್ಲೂ ಈ ತಂತ್ರಾಂಶಗಳು ನೆರವಾಗಬಲ್...
ಟಿ. ಜಿ. ಶ್ರೀನಿಧಿ ಇಂದಿನ ಬಹುತೇಕ ಮೊಬೈಲ್ ಫೋನುಗಳಲ್ಲಿ 'ಫ್ಲೈಟ್ ಮೋಡ್' ಎನ್ನುವುದೊಂದು ಸೌಲಭ್ಯವಿರುತ್ತದೆ. ವಿಮಾನದಲ್ಲಿ ಪ್ರಯಾಣಿಸುವಾಗ ನಿಮ್ಮ ಮೊಬೈಲನ್ನು ಫ್ಲೈಟ್ ಮೋಡ್ಗೆ ಬದಲಾಯಿಸಿ ಎಂದು ಹೇಳುವುದನ್ನೂ ನೀವು ಕೇಳಿರಬಹುದು. ಮೊಬೈಲಿನಿಂದ ಹೊರಡುವ ಅಥವಾ ಅದನ್ನು ತಲುಪುವ ರೇಡಿಯೋ ತರಂಗಾಂತರದ (radio-frequency) ಸಂಕೇತಗಳನ್ನು ನಿರ್ಬಂಧಿಸುವುದು ಫ್ಲೈಟ್ ಮೋಡ್ನ ಉದ್ದೇಶ. ಇದನ್ನು ಬಳಸಿದಾಗ ನಮ್ಮ ಮೊಬೈಲಿನ ನೆಟ್ವರ್ಕ್ ಸಂಪರ್ಕ ಕಡಿದುಹೋಗುತ್ತದೆ, ಅಂತರಜಾಲ ಸಂಪರ್ಕ - ಬ್ಲೂಟೂತ್ ಇತ್ಯಾದಿಗಳು ನಿಷ್ಕ್ರಿಯವಾಗುತ್ತವೆ. ಫೋಟೋ ಕ್ಲಿಕ್ಕಿಸುವುದು, ಹಾಡು ಕೇಳುವುದು ಮುಂತಾದ - ಬಾಹ್ಯ ಸಂಪರ್ಕದ ಅಗತ್ಯವಿಲ್ಲದೆ ಮಾಡಬಹುದಾದ - ಕೆಲಸಗಳನ್ನು ಮಾತ್ರ ಯಾವುದೇ ನಿರ್ಬಂಧವಿಲ್ಲದೆ ಮಾಡಿಕೊಳ್ಳಬಹುದು. ಟೇಕ್-ಆಫ್ನಿಂದ ಪ್ರಾರಂಭಿಸಿ ಲ್ಯಾಂಡಿಂಗ್ವರೆಗೆ ವಿಮಾನ ಪ್ರಯಾಣದಲ್ಲಿ ಮೊಬೈಲ್ ಬಳಕೆ ನಿಷಿದ್ಧ. ಮೊಬೈಲ್ ಸಂಕೇತಗಳು ವಿಮಾನದ ನಿಯಂತ್ರಣ ಹಾಗೂ ಸಂವಹನ ವ್ಯವಸ್ಥೆಗಳೊಡನೆ ಹಸ್ತಕ್ಷೇಪ ಮಾಡದಿರಲಿ ಎನ್ನುವುದು ಈ ನಿಷೇಧದ ಉದ್ದೇಶ. ಇದಕ್ಕೆ ಕಾರಣವಾದ ಸಂಕೇತಗಳನ್ನಷ್ಟೆ ನಿರ್ಬಂಧಿಸಿ ಮೊಬೈಲಿನ ಬೇರೆ ಸೌಲಭ್ಯಗಳನ್ನು ಬಳಸಲು ಅನುವುಮಾಡಿಕೊಡುವುದರಿಂದಲೇ ಫ್ಲೈಟ್ ಮೋಡ್ ಹೆಸರಿನಲ್ಲಿ ವಿಮಾನಕ್ಕೂ ಜಾಗ ಸಿಕ್ಕಿದೆ. ಅಂದಹಾಗೆ ಬೇರೆಬೇರೆ ಮೊಬೈಲುಗಳಲ್ಲಿ ಇದನ್ನು ಏರ್ಪ್ಲೇನ್ ಅಥವಾ ಏರೋಪ್ಲೇನ್ ಮೋಡ್ ಎಂದೂ ಗುರುತಿಸಲಾಗುತ್ತದೆ. ಫ್ಲ...
ಟಿ. ಜಿ. ಶ್ರೀನಿಧಿ ಕಳೆದ ವಾರ ಲಂಡನ್ ಒಲಿಂಪಿಕ್ಸ್ನಲ್ಲಿ ಪುರುಷರ ಸೈಕ್ಲಿಂಗ್ ಸ್ಪರ್ಧೆ ಇತ್ತಲ್ಲ, ನಗರದ ಹೊರವಲಯದಲ್ಲೂ ಸಾಗಿದ ಈ ಸೈಕಲ್ ರೇಸ್ ವೀಕ್ಷಿಸಲು ಲಕ್ಷಾಂತರ ಜನ ರಸ್ತೆಯ ಇಕ್ಕೆಲಗಳಲ್ಲೂ ನೆರೆದದ್ದು ಟೀವಿ ಪ್ರಸಾರದಲ್ಲಿ ಕಂಡುಬಂತು. ದಾರಿಯುದ್ದಕ್ಕೂ ಎಲ್ಲರೂ ಫೋಟೋ ಕ್ಲಿಕ್ಕಿಸುವವರೇ ಇದ್ದಂತಿತ್ತು. ರೇಸ್ ನೋಡಿ, ಫೋಟೋ ತೆಗೆದು ಸುಮ್ಮನಿದ್ದರೆ ಆದೀತೆ? ನಾವೆಲ್ಲಿದ್ದೇವೆ, ಏನು ಮಾಡುತ್ತಿದ್ದೇವೆ, ಯಾವ ಫೋಟೋ ತೆಗೆದಿದ್ದೇವೆ, ತೆಗೆದ ಫೋಟೋ ಹೇಗಿದೆ ಎಂಬುದನ್ನೆಲ್ಲ ಅವರು ಫೇಸ್ಬುಕ್ನಲ್ಲಿ-ಟ್ವಿಟ್ಟರಿನಲ್ಲಿ ಪ್ರಕಟಿಸಲು ಪ್ರಾರಂಭಿಸಿದರು. ಮೊದಲೇ ನಗರದ ಹೊರವಲಯ, ಅಲ್ಲಿನ ನೆಟ್ವರ್ಕ್ ಹೇಗಿತ್ತೋ ಏನೋ. ಇಷ್ಟೆಲ್ಲ ಮಾಹಿತಿಯ ಪ್ರವಾಹ ಒಂದೇ ಬಾರಿಗೆ ದೂರವಾಣಿ ಜಾಲದತ್ತ ನುಗ್ಗುತ್ತಿದ್ದಂತೆ ನೆಟ್ವರ್ಕ್ ಪೂರ್ತಿ ಸುಸ್ತುಹೊಡೆದುಬಿಟ್ಟಿತಂತೆ. ಇದರ ಅನಿರೀಕ್ಷಿತ ಪರಿಣಾಮವಾದದ್ದು ಪಂದ್ಯದ ನೇರಪ್ರಸಾರದ ಮೇಲೆ. ಯಾವ ಸ್ಪರ್ಧಿಗಳು ಯಾವ ಸ್ಥಾನದಲ್ಲಿದ್ದಾರೆ ಎನ್ನುವ ಮಾಹಿತಿ ಸೈಕಲ್ಗಳಲ್ಲಿ ಅಳವಡಿಸಲಾಗಿದ್ದ ಪುಟಾಣಿ ಜಿಪಿಎಸ್ ಟ್ರಾನ್ಸ್ಮಿಟರುಗಳಿಂದ ಹೊರಟು ಮೊಬೈಲ್ ದೂರವಾಣಿ ಜಾಲದ ಮೂಲಕ ಒಲಿಂಪಿಕ್ಸ್ ಬ್ರಾಡ್ಕಾಸ್ಟಿಂಗ್ ಸರ್ವಿಸ್ಗೆ ತಲುಪಬೇಕಿತ್ತು. ಆದರೆ ಮಾಹಿತಿಯ ಈ ಸಣ್ಣ ಹರಿವು ಟ್ವಿಟ್ಟರ್-ಫೇಸ್ಬುಕ್ನತ್ತ ಹರಿಯುತ್ತಿದ್ದ ಮಹಾಪೂರದಲ್ಲಿ ಕೊಚ್ಚಿಹೋಗಿ ಟೀವಿ ಪ್ರಸಾರಕ್ಕೆ ಪಂದ್ಯದ ಅಂಕಿಅಂಶಗಳೇ ಸಿಗದ ಪರಿಸ್ಥಿತಿ ನಿರ್ಮಾಣ...
Comments
Post a Comment